Sunday, August 2, 2026

BDA Apartments

Home Front Page  ಪಿಎಫ್ ಐ ಪ್ರತಿಭಟನೆ: ಹಿಂಸಾಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಕೇರಳ ಪೊಲೀಸರಿಗೆ ಹೈಕೋರ್ಟ್ ಸೂಚನೆ.

 ಪಿಎಫ್ ಐ ಪ್ರತಿಭಟನೆ: ಹಿಂಸಾಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಕೇರಳ ಪೊಲೀಸರಿಗೆ ಹೈಕೋರ್ಟ್ ಸೂಚನೆ.

ಕೇರಳ,ಸೆಪ್ಟಂಬರ್,23,2022(www.justkannada.in):  ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಮನೆ ಮೇಲೆ ಎನ್ ಐಎ ದಾಳಿಯನ್ನ ಖಂಡಿಸಿ ಕೇರಳದಲ್ಲಿ ಪಿಎಫ್ ಐ ಬಂದ್ ಗೆ ಕರೆ ನೀಡಿದ್ದು ಪ್ರತಿಭಟನೆ ವೇಳೆ ಬಸ್ ಗಳ ಮೇಲೆ ಕಲ್ಲೂ ತೂರಾಟ ನಡೆದಿದೆ.

ಕೇರಳದ ಕೊಲ್ಲಂ ಸೇರಿ ಹಲವು ಕಡೆಗಳಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದು ಹಿಂಸಾಚಾರಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇರಳ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಹಿಂಸಾಚಾರ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ  ಕೇಸ್ ದಾಖಲಿಸಿ.ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಉಗ್ರರಿಗೆ ಬೆಂಬಲಿಸಿದ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದ ಕಚೇರಿಗಳು ಹಾಗೂ ನಾಯಕರ ನಿವಾಸದ ಮೇಲೆ ದಾಳಿ ನಡೆಸಿ ಹಲವು ನಾಯಕರನ್ನ ವಶಕ್ಕೆ ಪಡೆದಿತ್ತು.

Key words: PFI- protest-High Court –instructs- Kerala Police