ಶಿವಮೊಗ್ಗ,ಸೆಪ್ಟಂಬರ್,28,2022(www.justkannada.in): ಕೇಂದ್ರ ಸರ್ಕಾರ ದೇಶಾದ್ಯಂತ 2022 ರಲ್ಲಿ ನಡೆಸಿದ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮೊದಲ ಸ್ಥಾನ ಪಡೆದರೇ ಮೈಸೂರಿಗೆ 3ನೇ ಸ್ಥಾನ ಲಭಿಸಿದೆ.![]()
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೇಯರ್ ಸುನೀತಾ ಅಣ್ಣಪ್ಪ, ಸ್ವಚ್ಛ ಸರ್ವೇಕ್ಷಣ-2022 ರ ಅಂಗವಾಗಿ ಕೇಂದ್ರ ಸರಕಾರದ ತಜ್ಞರ ತಂಡ ಕೈಗೊಂಡ ಕ್ಷೇತ್ರ ಭೇಟಿ ಮತ್ತು ಸಾರ್ವಜನಿಕ ಅಭಿಪ್ರಾಯದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉತ್ತಮ ಶ್ರೇಯಾಂಕ ಪಡೆದಿದೆ. ಅಕ್ಟೋಬರ್ 1 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಪಾಲಿಕೆಯ ವಿವಿಧ ವಿಭಾಗಗಳಲ್ಲಿ ತೋರಿರುವ ಕಾರ್ಯಕ್ಕಾಗಿ ಈ ಪ್ರಶಸ್ತಿ ಲಭಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಸ್ತು ನಿರ್ವಹಣೆ -2016 ರ ನಿಯಮದಂತೆ ಕೆಲವು ವಿನೂತನ, ನವೀನ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಮತ್ತು ಸಮರ್ಪಕವಾಗಿ ವಿಲೇ ಮಾಡಿರುವುದರಿಂದ ಈ ಪ್ರಶಸ್ತಿ ಲಭಿಸಿದೆ ಎಂದರು.
Key words: Clean -Survey –Campaign-Shimoga Corporation – first – country-3rd position -Mysore.







