Tuesday, August 4, 2026

BDA Apartments

Home Front Page ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಸಮಾವೇಶ:  ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಭಾಗಿ.

ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಸಮಾವೇಶ:  ರಾಹುಲ್ ಗಾಂಧಿ ಸೇರಿ ಹಲವು ನಾಯಕರು ಭಾಗಿ.

ಚಾಮರಾಜನಗರ,ಸೆಪ್ಟಂಬರ್,30,2022(www.justkannada.in): ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಪ್ರವೇಶಿಸಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಸಮಾವೇಶ ಮಾಡಲಾಗುತ್ತಿದೆ.

ತಮಿಳುನಾಡಿನ ಗೂಡ್ಲೂರು ಮೂಲಕ  ಗುಂಡ್ಲುಪೇಟೆ  ಭಾರತ್ ಜೋಡೋ ಯಾತ್ರೆ ಆಗಮಿಸಿದ್ದು, ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದಾರೆ.

ಇಂದಿನಿಂದ ರಾಜ್ಯದಲ್ಲಿ 21 ದಿನಗಳ ಕಾಲ ಪಾದಯಾತ್ರೆ ಸಾಗಲಿದ್ದು, ರಾಜ್ಯದ ನಾನಾ ಜಿಲ್ಲೆಗಳಲ್ಲಿ  ಹಾದು ಹೋಗಲಿದೆ. ಗುಂಡ್ಲುಪೇಟೆಯಿಂದ ಬೇಗೂರು, ನಂಜನಗೂಡು, ಮೈಸೂರು ಮಂಡ್ಯ, ಬೆಂಗಳೂರು, ಕೋಲಾರ, ಚಿತ್ರದುರ್ಗದ ಮೂಲಕ ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಪಾದಯಾತ್ರೆ ಪ್ರವೇಶಿಸಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ  ಈ ಪಾದಯಾತ್ರೆ ಸಾಗುತ್ತಿದೆ.

Key words: Bharat Jodo- Gundlupet- Rahul Gandhi –dk shivakumar