Sunday, October 18, 2026

Dasara Wishes

Happy Dasara
Home Front Page ಶಂಕುಸ್ಥಾಪನೆಗೆ ಹೆಚ್.ಡಿಕೆಗೆ ಆಹ್ವಾನ ನೀಡದ ಹಿನ್ನೆಲೆ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಪ್ರತಿಭಟನೆ.

ಶಂಕುಸ್ಥಾಪನೆಗೆ ಹೆಚ್.ಡಿಕೆಗೆ ಆಹ್ವಾನ ನೀಡದ ಹಿನ್ನೆಲೆ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಪ್ರತಿಭಟನೆ.

ರಾಮನಗರ,ಅಕ್ಟೋಬರ್,1,2022(www.justkannada.in): ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು, ರಸ್ತೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಹ್ವಾನಿಸದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕು ರಾಂಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಹ್ವಾನಿಸದೇ  ಶಿಷ್ಟಾಚಾರ ಉಲ್ಲಂಘನೆ ಮಾಡಿದ್ಧಾರೆ ಎಂದು ಆರೋಪಿಸಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿ.ಪಿ ಯೋಗೇಶ್ವರ್  ಆಗಮಿಸುತ್ತಿದ್ದಂತೆ ಪ್ರತಿಭಟನೆಗಿಳಿದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಬಳಿಕ ಸಿಪಿ ಯೋಗೇಶ್ವರ್ ಕಾಮಗಾರಿಗೆ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

Key words: Protest -against -former minister- CP Yogeshwar-jds