Sunday, August 23, 2026

BDA Apartments

Home Cinema ಅಕ್ಟೋಬರ್ 21ರಿಂದ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್

ಅಕ್ಟೋಬರ್ 21ರಿಂದ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್

ಬೆಂಗಳೂರು, ಅಕ್ಟೋಬರ್ 11, 2022 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿಅಕ್ಟೋಬರ್ 21ರಿಂದ  ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಆಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಮಾಡಿ ಆಟಗಾರರಿಗೆ ಶುಭಾಶಯ ಕೋರಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವ ಆರ್. ಅಶೋಕ್, ಅಪ್ಪು ಒಟ್ಟಿಗಿನ ಒಡನಾಟ ಬಿಚ್ಚಿಟ್ಟರು. ರಾಜ್ ಕುಮಾರ್ ಅವರಲ್ಲಿದ್ದ ಗುಣಗಳು ಅಪ್ಪುವಿನಲ್ಲಿದ್ದವು. ನವೆಂಬರ್ ತಿಂಗಳಲ್ಲಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತವೆ ಎಂದರು.

ಜಾಕಿ ರೈಡರ್ಸ್, ರಾಜ್ ಕುಮಾರ್ ಕಿಂಗ್ಸ್, ಅರಸು ಹಂಟರ್ಸ್, ಬಿಂದಾಸ್ ಸೂಪರ್ ಸ್ಟಾರ್ಸ್, ಮಯೂರ್ ಸ್ಟ್ರೈಕರ್ಸ್, ಜೇಮ್ಸ್ ವಾರಿಯರ್, ಪವರ್ ಪೈಥಾನ್, ದೊಡ್ಮನೆ ಡ್ರ್ಯಾಗನ್ ಸೇರಿದಂತೆ ಎಂಟು ತಂಡಗಳು ಭಾಗಿಯಾಗಲಿವೆ. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡಗಳನ್ನು ಮುನ್ನೆಡೆಸಲಿದ್ದಾರೆ.