Wednesday, October 28, 2026

Dasara Wishes

Happy Dasara
Home Front Page ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ.

ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ.

ಬೆಂಗಳೂರು,ಅಕ್ಟೋಬರ್,17,2022(www.justkannada.in): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದ್ದು 5 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ Continued rain in Uttara Kannada district

ಅಕ್ಟೋಬರ್ 20 ರಿಂದ 22ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ ಕೊಡಗು, ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಮುಂದಿನ ಎರಡು ಮೂರು ದಿನ ಭಾರಿ ಮಳೆ ಸಾಧ್ಯತೆ ಇದ್ದು,  ಹಂತ ಹಂತವಾಗಿ ಚಳಿ ಪ್ರಮಾಣ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Key words: Heavy rain -state – next -four – five days.