Monday, September 21, 2026

BDA Apartments

Home Front Page ಸುಗ್ರಿವಾಜ್ಞೆ ಮೂಲಕ ಎಸ್.ಸಿ ಮತ್ತು ಎಸ್ ಟಿ  ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ.

ಸುಗ್ರಿವಾಜ್ಞೆ ಮೂಲಕ ಎಸ್.ಸಿ ಮತ್ತು ಎಸ್ ಟಿ  ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ.

ಬೆಂಗಳೂರು,ಅಕ್ಟೋಬರ್,20,2022(www.justkannada.in): ಸುಗ್ರಿವಾಜ್ಞೆ ಮೂಲಕ ಎಸ್.ಸಿ ಮತ್ತು ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.  ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಪ್ರಮಾಣ ಏರಿಕೆ ಸಂಬಂಧ ಕಾನೂನು ಇಲಾಖೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.   ಸುಗ್ರಿವಾಜ್ಞೆ ಮೂಲಕ ಮೀಸಲಾತಿ ಏರಿಕೆ ಜಾರಿಗೆ ಸಂಪುಟ ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ತೀರ್ಮಾನಿಸಿತ್ತು ಎಂದರು.

ಇನ್ನು ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರುಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜೆ.ಸಿ ಮಾಧುಸ್ವಾಮಿ ತಿಳಿಸಿದರು.

Key words: Cabinet-meeting- increase -SC and ST- reservation