Monday, October 5, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ- ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್.ಅಶೋಕ್.

ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ- ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್.ಅಶೋಕ್.

ಬೆಂಗಳೂರು,ಅಕ್ಟೋಬರ್,24,2022(www.justkannada.in): ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ. ಆ ಗಂಡೆದೆಯನ್ನ ತೋರಿಸಿದವರು ಸಿಎಂ ಬಸವರಾಜ ಬೊಮ್ಮಾಯಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹಾಡಿ ಹೊಗಳಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್,  ಸಿಎಂ ಬೊಮ್ಮಾಯಿ  ಮೆಂಟಲಿ ಪ್ರಿಪೇರ್ ಆಗಿ ಇದನ್ನ ಮಾಡಿದ್ದಾರೆ. ಚಾಣಕ್ಯ ವಿದ್ಯೆ ಕಲಿತವರು ಸಿಂ ಬೊಮ್ಮಾಯಿ .  ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳದ ಬಗ್ಗೆ, ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದರು.kpcc-president-dk-shivakumar-function-minister-r-ashok

ಹಿಂದಿನ ಸರ್ಕಾರಗಳು ಮೀಸಲಾತಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಜೇನುಗೂಡಿಗೆ ಕಲ್ಲು ಹೊಡೆದಂತಾಗುತ್ತದೆ ಎಂದಿದ್ದರು. ಆದರೆ ನಾವು ಎಸ್ ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಗಂಡೆದೆ ಇರುವವರಿಂದ ಮಾತ್ರ ಇದು ಸಾಧ್ಯ ಎಂದು ಸಚಿವ ಅಶೋಕ್ ತಿಳಿಸಿದರು.

Key words: reservation-Minister -R. Ashok- praised -CM Bommai.