Tuesday, September 1, 2026

BDA Apartments

Home Front Page ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು.

ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು.

ಬೆಂಗಳೂರು, ಅಕ್ಟೋಬರ್, 25,2022 (www.justkannada.in):  ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು ಸಚಿವ  ವಿ.ಸೋಮಣ್ಣ ವಿರುದ್ಧ ದೂರು ನೀಡಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ.ಸೋಮಣ್ಣ, ಅಕ್ಟೋಬರ್ 23 ರಂದು ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದರು ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಇದೀಗ ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿರುವ ಕಾಂಗ್ರೆಸ್  ಕ್ರಮ ಕೈಗೊಳ್ಳವಂತೆ ಆಗ್ರಹಿಸಿದೆ.

Key words: Complaint -State Commission for Women- against –Minister- V. Somanna.