Tuesday, August 25, 2026

BDA Apartments

Home Front Page ಸಿಎಂ ತವರಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: 20 ಕೋಟಿ ರೂ. ಅನುದಾನ ಬಿಡುಗಡೆ

ಸಿಎಂ ತವರಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: 20 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು, ಅಕ್ಟೋಬರ್ 30, 2022 (www.justkannada.in): ಹಾವೇರಿಯಲ್ಲಿ ಜ.6ರಿಂದ ಅರ್ಥಪೂರ್ಣವಾಗಿ, ವಿಭಿನ್ನವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿದ್ದು, ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ,  ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಡೆಸಲು ನಿರ್ಧರಿಸಲಾಗಿದೆ. ಒಂದು ಪ್ರಧಾನ ವೇದಿಕೆ, ಎರಡು ಉಪವೇದಿಕೆಗಳು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಹೇಳಲಾಗಿದೆ. ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.