Tuesday, August 18, 2026

BDA Apartments

Home Front Page ನವೆಂಬರ್ 20ರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ.ಸಿ.ನಾಗೇಶ್

ನವೆಂಬರ್ 20ರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಅಕ್ಟೋಬರ್ 30, 2022 (www.justkannada.in): ನವೆಂಬರ್ 20 ರ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀಗತಿ ಜಾರಿ ಮಾಡುವ ಸಂಬಂಧ ನವೆಂಬರ್ 2 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿಯೂ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು  ಬಿ.ಸಿ.ನಾಗೇಶ್ ಹೇಳಿದ್ದಾರೆ.