Tuesday, September 22, 2026

BDA Apartments

ರಾಜ್ಯದ ವಿವಿಧೆಡೆ ನಾಲ್ಕು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ BDA JK_Adv BDA Adv
Home Front Page ರಾಜ್ಯದ ವಿವಿಧೆಡೆ ನಾಲ್ಕು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ನಾಲ್ಕು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ನವೆಂಬರ್ 06, 2022 (www.justkannada.in): ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಕುರಿತು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.