Tuesday, September 22, 2026

BDA Apartments

Home Front Page ಕೆಪಿಸಿಸಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಸ್ವಾಗತ: ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಕೆಪಿಸಿಸಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಸ್ವಾಗತ: ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಬೆಂಗಳೂರು, ನವೆಂಬರ್ 06, 2022 (www.justkannada.in): ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಖರ್ಗೆ ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕೆಪಿಸಿಸಿ ವತಿಯಿಂದ ಇಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.   ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ.

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ.