Wednesday, September 30, 2026

BDA Apartments

ರಾಜ್ಯದಲ್ಲಿ ಹಲವೆಡೆ ಇಂದು ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ BDA JK_Adv BDA Adv
Home Front Page  ರಾಜ್ಯದಲ್ಲಿ ಹಲವೆಡೆ ಇಂದು ಮಳೆ ಸಾಧ್ಯತೆ:  ಯೆಲ್ಲೋ ಅಲರ್ಟ್ ಘೋಷಣೆ.

 ರಾಜ್ಯದಲ್ಲಿ ಹಲವೆಡೆ ಇಂದು ಮಳೆ ಸಾಧ್ಯತೆ:  ಯೆಲ್ಲೋ ಅಲರ್ಟ್ ಘೋಷಣೆ.

ಬೆಂಗಳೂರು,ನವೆಂಬರ್,11,2022(www.justkannada.in): ಬೆಂಗಳೂರು,  ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರ್ಭಟಿಸಲಾರಂಭಿಸಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, 8 ಜಿಲ್ಲೆಗಳಿಗೆ ಹಳದಿ ಅಲರ್ಟ್  ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Key words: Rain – state- today-Yellow alert -announced.