ಬೆಂಗಳೂರು,ನವೆಂಬರ್,17,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮವೆಸಗಲಾಗಿದೆ. ಮತದಾರರ ಮಾಹಿತಿ ಸಂಗ್ರಹಿಸಲಾಗಿದೆ. ಈ ಅಕ್ರಮದಲ್ಲಿ ಸಿಎಂ ಅವರೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ದಿವಾಳಿಯಾಗಿದ್ದಾರೆ. ಇದು ಆಧಾರ ರಹಿತ ಆರೋಪ. ಬೆಂಗಳೂರಿನಲ್ಲಿ ಮತದಾರರಿಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತದೆ. ಹೀಗಾಗಿ ಚಿಲುಮೆ ಸಂಸ್ಥೆಗೆ ಬಿಬಿಎಂಪಿ ಚುನಾವಣಾ ಆಯೋಗ ಅನುಮತಿ ನೀಡಿದೆ. 2018ರಲ್ಲೂ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂದರು.
ಕಾಂಗ್ರೆಸ್ ನಾಯಕರು ದೂರು ನೀಡಿದ್ರೆ ತನಿಖೆಯಾಗಲಿದೆ. ತನಿಖೆ ನಡೆದ ಮೇಲೆ ನಿಜ ಸತ್ಯಾಂಶ ಹೊರಬರಲಿದೆ. ತಪ್ಪು ನಡೆದಿದ್ದರೇ ಈ ಬಗ್ಗೆ ಕಮಿಷನರ್ ಗೆ ದೂರು ನೀಡಲಿ ನಾನೂ ಕೂಡ ತನಿಖೆ ನಡೆಸುವಂತೆ ಸೂಚಿಸುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Key words: Baseless -allegation –Congress-complaint-CM Bommai.






