Friday, September 18, 2026

BDA Apartments

ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಮಾಜಿ ಸಿ...
Home Front Page ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಮೈಸೂರು,ನವೆಂಬರ್,18,2022(www.justkannada.in):  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ  ಸಿದ್ಧರಾಮಯ್ಯ, ಕೋಲಾರ, ಬಾದಾಮಿ, ವರುಣಾಕ್ಷೇತ್ರ ಶಾರ್ಟ್ ​​ಲಿಸ್ಟ್​​ನಲ್ಲಿದೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ ಎಂದು ತಿಳಿಸಿದರು. ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ siddaramaiah asiddar...

ಹಾಗೆಯೇ ಸೋಲಿನ ಭಯದಲ್ಲಿ ಸರ್ವೆ ಮಾಡುತ್ತಿದ್ದಾರೆ ಎನ್ನುತ್ತಾರೆ. ಆದರೆ ಸರ್ವೆ ಮಾಡಿಸಿದರೆ ತಪ್ಪೇನು ? ಪ್ರಧಾನಿ ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವಾ? ಮೋದಿ ಸರ್ವೆ ಮಾಡಿಸಿರಲಿಲ್ವಾ ? ಸುರಕ್ಷಿತ ಕ್ಷೇತ್ರಕ್ಕಾಗಿ ಸರ್ವೆ ಮಾಡಿಸಿರುತ್ತಾರೆ. ಆದರೆ ನಾನು ಸರ್ವೆ ಮಾಡಿಸಿಲ್ಲ, ಪಕ್ಷವೂ ಸರ್ವೆ ಮಾಡಿಸಿಲ್ಲ ಎಂದು  ಸಿದ್ಧರಾಮಯ್ಯ ತಿಳಿಸಿದರು.

Key words: Contest – next- assembly -election – only –one- constituency-Siddaramaiah