Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Front Page ಬಂಧನದ ಆತಂಕ ದೂರ: ಬಿ.ಎಲ್.ಸಂತೋಷ್’ಗೆ ಬಿಗ್ ರಿಲೀಫ್ ನೀಡಿದ ತೆಲಂಗಾಣ ಹೈಕೋರ್ಟ್

ಬಂಧನದ ಆತಂಕ ದೂರ: ಬಿ.ಎಲ್.ಸಂತೋಷ್’ಗೆ ಬಿಗ್ ರಿಲೀಫ್ ನೀಡಿದ ತೆಲಂಗಾಣ ಹೈಕೋರ್ಟ್

ಬೆಂಗಳೂರು, ನವೆಂಬರ್ 20, 2022 (www.justkannada.in): ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೌದು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಬಂಧಿಸಬಾರದು ಎಂದು ತೆಲಂಗಾಣ ಹೈಕೋರ್ಟ್‌ ಆದೇಶ ನೀಡಿದೆ.

ಟಿಆರ್‌ಎಸ್‌ ಶಾಸಕರ ಖರೀದಿಗೆ ಸಂಬಂಧಿಸಿದಂತೆ 21ರಂದು ವಿಚಾರಣೆಗೆ ಆಗಮಿಸಬೇಕು. ಇಲ್ಲದೇ ಇದ್ದಲ್ಲಿ ಬಂಧಿಸಲಾಗುತ್ತದೆ ಎಂದು ಎಸ್‌ಐಟಿ ಸಮನ್ಸ್‌ ನೀಡಿತ್ತು. ಅದನ್ನು ಪ್ರಶ್ನಿಸಿ ಬಿಜೆಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, ಬಿ.ಎಲ್‌.ಸಂತೋಷ್‌ ಅವರನ್ನು ಬಂಧಿಸಬಾರದು ಎಂದು ಆದೇಶಿಸಿದೆ.

ಬಿ.ಎಲ್‌.ಸಂತೋಷ್‌ ಅವರಿಗೆ ನೋಟಿಸ್‌ನ ಪ್ರತಿ ದೊರಕುವ ಅವರಿಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದು ಬೇಡ. ದೆಹಲಿ ಪೊಲೀಸ್‌ ಇಲಾಖೆಯ ನೆರವಿನಿಂದ ಸಂತೋಷ್‌ ಅವರಿಗೆ ನೋಟಿಸ್‌ ಸಿಗುವಂತೆ ಮಾಡಬೇಕು ಎಂದು ಸೂಚನೆ ನೀಡಿದೆ.