Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Cinema ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಟ ಜೈಜಗದೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು, ಜೂನ್ 09, 2022 (www.justkannada.in): ನಟ ಜೈಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಸ್ ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಜಯರಾಮೇಗೌಡ ಅನ್ನುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಜಯರಾಮೇಗೌಡ ಅವರು ಬಸ್ಸಿನಿಂದ ಕೆಳಕ್ಕೆ ಇಳಿಯುತ್ತಿರುವ ಸಂದರ್ಭದಲ್ಲಿ ಬಸ್ ನ ಹಿಂದೆಯೇ ಕಾರಿನಲ್ಲಿ ಬರುತ್ತಿದ್ದ ಜೈಜಗದೀಶ್ ಅವರು ಕಾರು ನಿಲ್ಲಿಸಿ, ಬಸ್ ನಿಂದ ಬಾಟಲಿ ಎಸೆಯುತ್ತೀಯಾ ಎಂದು ಕೆಟ್ಟದಾಗಿ ನಿಂದಿಸಿದರು. ಜತೆಗೆ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.