ರಾಜ್ಯದ ಒಬ್ಬ ದಲಿತ ಸಂಸದನಿಗೂ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿಲ್ಲ- ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದ ಮಾಜಿ ಸಿಎಂ ಸಿದ್ದರಾಮಯ್ಯ..

ಬೆಂಗಳೂರು,ಜೂ,5,2019(www.justkannada.in): ರಾಜ್ಯದ ಒಬ್ಬ ದಲಿತ ಸಂಸದನಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ನೀಡಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ ಮತ್ತೇನಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಕಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ನೀಡಿಲ್ಲ. ಇದಕ್ಕಿಂತ  ದೊಡ್ಡ ಅನ್ಯಾಯ, ದ್ರೋಹ ಮತ್ತೇನಿದೆ..? ಎಂದು ಪ್ರಶ್ನಿಸಿದ್ದಾರೆ.

ಹಾಗೆಯೇ ಬಾಯಿ ಬಡಾಯಿ ಮೂಲಕ ಉದ್ದಾರ ಆಗಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Key words: A Dalit MP from the state has not give chance in the Union Cabinet-Former CM Siddaramaiah sparked against Prime Minister Narendra Modi

#CMSiddaramaiah #PrimeMinisterNarendraModi  #twitter