ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಗೆ ನಿರ್ಧಾರ

ಬೆಂಗಳೂರು, ಸೆಪ್ಟೆಂಬರ್ 11, 2022 (www.justkannada.in): ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಪಕ್ಷದ ನಾಯಕತ್ವ ಒಪ್ಪಿಗೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಯಸುವ ಯಾರಾದರೂ ಚುನಾವಣಾ ಕಾಲೇಜನ್ನು ರೂಪಿಸುವ ಎಲ್ಲಾ 9,000 ಪ್ರತಿನಿಧಿಗಳ ಪಟ್ಟಿಯನ್ನು ನೋಡಲು ಸಾಧ್ಯವಾಗುತ್ತದೆ.

ಈ ಪಟ್ಟಿಯು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಕಚೇರಿಯಲ್ಲಿ ಸೆಪ್ಟೆಂಬರ್ 20 ರಿಂದ ಲಭ್ಯವಿರುತ್ತದೆ ಎಂದು ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರು ತಮ್ಮ ರಾಜ್ಯದ 10 ಪ್ರತಿನಿಧಿಗಳ ಹೆಸರನ್ನು ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ಪರಿಶೀಲಿಸಬಹುದು ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಶ್ರೀ ಮಿಸ್ತ್ರಿ ಹೇಳಿದ್ದಾರೆ.