ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿರುವ  ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು, ಆಗಸ್ಟ್ 15ರೊಳಗೆ ಒಳಮೀಸಲಾತಿ ಜಾರಿಯಾಗದಿದ್ದರೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಆಗಸ್ಟ್ 10 ರಿಂದ 15ರೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಆಗಸ್ಟ್ 1 ರಂದು ಒಳ ಮೀಸಲಾಗಿ ಜಾರಿಗೆ ಆಗ್ರಹಿಸಿ  ಜಿಲ್ಲಾ ಕೇಂದ್ರಗಳಲ್ಲಿ  ಮಾದಿಗ ಸಮುದಾಯದಿಂದ ಅರಬೆತ್ತಲೆ ಪ್ರತಿಭಟನೆ ನಡೆಯಲಿದೆ. ಧರಣಿ ಬಳಿಕವೂ ಒಳ ಮೀಸಲಾತಿ ಜಾರಿಯಾಗದಿದ್ದರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತೇವೆ ಎಂದು ತಿಳಿಸಿದರು.

ವೈಜ್ಞಾನಿಕ ದತ್ತಾಂಶವಿದ್ದರೆ ರಾಜ್ಯಗಳು ಒಳಮೀಸಲಾತಿ ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆಗಸ್ಟ್ 1 ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆ ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ಮಾದಿಗರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಒಳ ಮೀಸಲಾತಿ ಜಾರಿಗೊಳಿಸಿ ಏಳು ತಿಂಗಳಾಗಿದೆ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀಸಲು ಕುರಿತು ಯಾವುದೇ ಸ್ಪಷ್ಟತೆ ನೀಡುತ್ತಿಲ್ಲ  ಎಂದು ಸಿಎಂ ಸಿದ್ದರಾಮಯ್ಯಗೆ ಕುಟುಕಿದ್ದಾರೆ.vtu

Key words: Karnataka bandh, internal reservation, A. Narayanaswamy