ಪಾವಗಡ ತಾಲೂಕಿನಲ್ಲಿ ಭೀಕರ ಅಪಘಾತ: ಮೃತರ ಸಂಖ್ಯೆ 8ಕ್ಕೆ ಏರಿಕೆ, 20ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ತುಮಕೂರು, ಮಾರ್ಚ್ 19, 2022 (www.justkannada.in): ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ.

ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್​ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್​, ರಸ್ತೆ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ 6 ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.