ವರುಣ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗೆ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಎಎಪಿ.

ಮೈಸೂರು,ನವೆಂಬರ್,9,2023(www.justkannada.in): ಸಿಎಂ ಸಿದ್ದರಾಮಯ್ಯನವರ ವರುಣ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಶೋಚನೀಯವಾಗಿದೆ. ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸದಿದ್ದರೇ ಉಗ್ರ ಹೋರಾಟ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಸೋಸಲೆ ಸಿದ್ದರಾಜು ಎಚ್ಚರಿಕೆ ನೀಡಿದರು.

ಇಂದು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಸಲೆ ಸಿದ್ದರಾಜು,  ಟಿ.ನರಸೀಪುರ ಪಟ್ಟಣದ ಹೃದಯ ಭಾಗದಲ್ಲೇ ಈ ಶಾಲೆ ಇದ್ದು. ಈ ಶಾಲೆಯೂ ವರುಣ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ. ಪ್ರಸ್ತುತ ಶಾಲೆಯಲ್ಲಿ 275 ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೂಡ ಗ್ರಾಮೀಣ ಭಾಗದಿಂದ ಬರುವ ಬಡ ವಿದ್ಯಾರ್ಥಿಗಳು.

ಇಂತಹ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇಲ್ಲವೇ ಇಲ್ಲ. ಶಾಲೆಗೆ ಹಾಕಲಾಗಿರುವ ಕಾಂಪೌಂಡ್ ಬಿದ್ದು ವರ್ಷಗಳೇ ಕಳೆದಿದೆ. ಇದರಿಂದ ಪುಂಡ ಪೋಕರಿಗಳ ಅಡ್ಡವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಿದ್ದರಾಮಯ್ಯನವರು ಈ ಸಮಸ್ಯೆ ಬಗೆಹರಿಸಬೇಕು.ಇಲ್ಲವಾದಲ್ಲಿ ಶಾಲೆಯ ಮುಂಭಾಗ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸೋಸಲೆ ಸಿದ್ದರಾಜು ಹೇಳಿದರು.

Key words: AAP -warned – demanding- basic facilities -government schools – Varuna Constituency