Friday, August 7, 2026

BDA Apartments

Home Front Page ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಬ್ದುಲ್ ಜಬ್ಬಾರ್ ಅಮಾನತು

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಬ್ದುಲ್ ಜಬ್ಬಾರ್ ಅಮಾನತು

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ  ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಸಂಬಂಧ ಮತ್ತಷ್ಟು ದಾಖಲೆಗಳ ಲಭ್ಯವಾದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ  ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿಗಷ್ಟೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್‌ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು. ಇತ್ತ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಅವರನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು.

Key words: Abdul Jabbar, suspended ,primary membership ,Congress party