Friday, October 23, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ : ಸಚಿವ ಬಸವರಾಜ...

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ : ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾರ್ಚ್,21,2021(www.justkannada.in) : ಶಾಲಾ, ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.jk

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ‌ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ದಾಖಲೆ ಮತಗಳಿಂದ ಜಯ ಗಳಿಸಲಿದ್ದಾರೆ ಎಂದಿದ್ದಾರೆ.

Ramesh Zarakiholi-case-CD-investigate-Special-Investigation-Team-Structure-Minister-Basavaraja Bommai 

ಎಸ್ ಐ ಟಿ ಸಮರ್ಥವಾಗಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿದೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ. ಎಸ್ ಐ ಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು.

key words : About-lockdown-state-No discussion-Minister-Basavaraja Bommai