ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ : ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಡಿಸೆಂಬರ್,30,2020(www.justkannada.in) : ವಿದೇಶದಿಂದ ಬಂದ ಕೆಲವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಈ ರೀತಿಯ ಬೇಜವಾಬ್ದಾರಿ ಮಾಡದೇ ತಾವಾಗಿಯೇ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಕೊರೊನಾ ಹೊಸ ಪ್ರಭೇದದ ಬಗ್ಗೆ ಕಟ್ಟೆಚ್ಚರವಹಿಸುವ ಜೊತೆಗೆ ವಿದೇಶದಿಂದ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಜೊತೆಗೆ  2 ತಿಂಗಳ ಹಿಂದೆಯೇ ರಾಜ್ಯಕ್ಕೆ ಬಂದವರು ಕೂಡ ಟೆಸ್ಟ್ ಮಾಡಿಸಿಕೊಳ್ಳಬೇಕು. ಈಗಿರುವ ಕೊರೊನಾ ವಿರುದ್ಧದ ಹೋರಾಟದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಸಧ್ಯಕ್ಕೆ ಮಾಡುವುದಿಲ್ಲ.abroad,Some,who,came,Escaping,Running,CM B.S.Yeddyurappa

ದೆಹಲಿಯಿಂದ ಸೂಚನೆ ಬಂದರೆ ಮಾತ್ರ ಬದಲಾವಣೆ ಮಾಡುತ್ತೇವೆಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

key words : abroad-Some-who-came-Escaping-Running-CM B.S.Yeddyurappa