Monday, August 10, 2026

BDA Apartments

Home Front Page ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ಹಾಕಿ ಪ್ರತಿಭಟನೆ.

ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ ಹಾಕಿ ಪ್ರತಿಭಟನೆ.

ಬೆಂಗಳೂರು,ಜುಲೈ,30,2022(www.justkannada.in):  ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿ ಪಿಎಫ್ ಐ ಮತ್ತು ಎಸ್ ಡಿಪಿಐ ನಿಷೇಧಿಸುವಂತೆ ಆಗ್ರಹಿಸಿ ಎಬಿವಿಪಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿದ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದರು. ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಸ್ ಡಿಪಿಐ ಪಿಎಫ್ ಐ ನಿಷೇಧಿಸುವಂತೆ ಒತ್ತಾಯಿಸಿದರು.

ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನ ಪೊಲೀಸರು ತಡೆದು ವಶಕ್ಕೆ ಪಡೆದರು.

Key words: ABVP- protest-Home Minister- Araga Jnanendra- residence