Sunday, August 23, 2026

BDA Apartments

Home Front Page ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮನೆ ಮೇಲೆ ಎಸಿಬಿ ದಾಳಿ, ದಾಖಲೆ ಪರಿಶೀಲನೆ…

ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮನೆ ಮೇಲೆ ಎಸಿಬಿ ದಾಳಿ, ದಾಖಲೆ ಪರಿಶೀಲನೆ…

ಬೆಂಗಳೂರು,ನವೆಂಬರ್,24,2020(www.justkannada.in):  ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ಆಪ್ತರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.kannada-journalist-media-fourth-estate-under-loss

ಬೆಂಗಳೂರಿನ ಒಟ್ಟು 9 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ ನಡೆಸಲಾಗಿದ್ದು, ಮತ್ತಷ್ಟು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೆ ಕೆಎಎಸ್​ ಅಧಿಕಾರಿ ಡಾ. ಸುಧಾ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಲಾಗಿತ್ತು. ಇದೀಗ ಮತ್ತೊಮ್ಮೆ ಅವರಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಾ. ಸುಧಾ ಅವರ ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ.

ನಗರದ ದೊಡ್ಡ ಆಲದಮರದ ಭೀಮನಕುಪ್ಪೆಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಇಂದು ಬೆಳಗ್ಗೆ 6.30ಕ್ಕೆ ರಿಯಲ್ ಎಸ್ಟೇಟ್ ಏಜೆಂಟ್ ಮಹೇಶ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿತ್ತಿದೆ. ಇನ್ನು ಈ ವೇಳೆ ಮಹೇಶ್ ಅವರ ಮನೆಯಲ್ಲಿ ಹಣ ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.acb-attack-kas-officer-dr-sudhas-friends-house

ಇನ್ನು ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಭೀಮನ ಕುಪ್ಪೆಯ ಪ್ರಭು ಅವರ ಮನೆಯಲ್ಲಿನ ಕಾಗದ ಪತ್ರಗಳನ್ನು ಮುಂದಿಟ್ಟು ಪರಿಶೀಲನೆ ನಡೆಸಲಾಗಿದೆ. ದಾಖಲೆ ಪತ್ರಗಳನ್ನು ಮುಂದಿಟ್ಟುಕೊಂಡು ಪ್ರಭು ಅವರಿಂದ ಮಾಹಿತಿ ಪಡೆಯಲಾಗುತ್ತಿದೆ.

Key words: ACB -attack -KAS officer -Dr Sudha’s-friends- house