ಮೈಸೂರಿನಲ್ಲಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ…

ಮೈಸೂರು,ಆಗಸ್ಟ್,26,2020(www.justkannada.in):  ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಮೈಸೂರಿನಲ್ಲಿ ಅಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.jk-logo-justkannada-logo

ಮೈಸೂರು ಮಹಾನಗರ ಪಾಲಿಕೆ ಅಭಿವೃದ್ದಿ ಅಧಿಕಾರಿ, ಉಪ ಅಯುಕ್ತ  ನಾಗರಾಜು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ  ನಡೆಸಿದ್ದಾರೆ. ಕುವೆಂಪುನಗರ ನಿವಾಸ, ಪಾಲಿಕೆ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.acb-attack-officer-house-mysore

ಬೆಂಗಳೂರು ಎಸಿಬಿ ಎಸ್ಪಿ ಮಾರ್ಗದರ್ಶನದಲ್ಲಿ ರಾಮನಗರ ಡಿವೈಎಸ್‌ಪಿ ನೇತೃತ್ವದಲ್ಲಿ ಬೆಂಗಳೂರು ತಂಡದಿಂದ ದಾಳಿ ನಡೆಸಲಾಗಿದ್ದು ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.

Key words: ACB -attack –officer- house – Mysore