ಬೆಂಗಳೂರಿನ ಮಧ್ಯವರ್ತಿಗಳು ಮತ್ತು ಏಜೆಂಟರಿಗೆ ಎಸಿಬಿ ಶಾಕ್: 9 ಕಡೆಗಳಲ್ಲಿ ದಾಳಿ, ದಾಖಲೆ ಪರಿಶೀಲನೆ.

ಬೆಂಗಳೂರು,ಮಾರ್ಚ್,22,2022(www.justkannada.in):  ಬೆಂಗಳೂರಿನಲ್ಲಿ ಮಧ್ಯವರ್ತಿಗಳು ಮತ್ತು ಏಜೆಂಟರನ್ನ ಗುರಿಯಾಗಿಸಿಕೊಂಡು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು ಪರಿಶೀಲಿಸುತ್ತಿದ್ದಾರೆ. ಒಟ್ಟು 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ. ಮಧ್ಯವರ್ತಿಗಳಾದ ಅಶ್ವತ್, ರಘು ಬಿ.ಎನ್, . ಮುನಿರತ್ನ ಅಲಿಯಾಸ್ ರತ್ನವೇಲು, ಮೋಹನ್, ಮನೋಜ್, ತೇಜು, ರಾಮ, ಲಕ್ಷ್ಮಣ, ಚಿಕ್ಕಹನುಮ್ಮಯ್ಯ ಎಂಬುವವರ ನಿವಾಸದ ಮೇಲೆ ಎಸಿಬಿ ದಾಳಿಯಾಗಿದೆ.

ದಾಳಿ ವೇಳೆ ಬ್ರೋಕರ್ ಅಶ್ವಥ್ ಮನೆಯಲ್ಲಿ ಕೋಟಿ ಕೋಟಿ ಬೆಲೆ ಬಾಳುವ ಕಾರುಗಳು ಪತ್ತೆಯಾಗಿವೆ. ಮರ್ಸಿಡಿಸ್ ಬೆಂಜ್, ಇನ್ನೋವಾ, ಆಡಿಕಾರು ಪತ್ತೆಯಾಗಿದೆ . ಇನ್ನು ಮೋಹನ್ ಮನೆಯಲ್ಲಿ 4.5 ಕೆಜಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ.

Key words: ACB –raid- Agents – Bangalore