Wednesday, September 16, 2026

BDA Apartments

ಕೆಎಎಸ್ ಅಧಿಕಾರಿ ಕೆ.ರಂಗನಾಥ್ ನಿವಾಸದ ಮೇಲೆ ಎಸಿಬಿ ದಾಳಿ, ಪರಿಶೀಲನೆ BDA JK_Adv BDA Adv
Home Front Page ಕೆಎಎಸ್ ಅಧಿಕಾರಿ ಕೆ.ರಂಗನಾಥ್ ನಿವಾಸದ ಮೇಲೆ ಎಸಿಬಿ ದಾಳಿ, ಪರಿಶೀಲನೆ.

ಕೆಎಎಸ್ ಅಧಿಕಾರಿ ಕೆ.ರಂಗನಾಥ್ ನಿವಾಸದ ಮೇಲೆ ಎಸಿಬಿ ದಾಳಿ, ಪರಿಶೀಲನೆ.

ಬೆಂಗಳೂರು, ಮಾರ್ಚ್ 25,2022(www.justkannada.in):  ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿನ ಮನೆ, ದೊಡ್ಡಬಳ್ಳಾಪುರದಲ್ಲಿನ ಟ್ರಸ್ಟ್, ಕಚೇರಿ, ಶಾಲೆ ಹಾಗೂ ಸಂಬಂಧಿಕರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಎಸಿಬಿ ಅಧಿಕಾರಿಗಳ 5 ತಂಡಗಳಿಂದ ದಾಳಿ ಮಾಡಿದೆ. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ  ರಂಗನಾಥ್ ಅವರ ವಿರುದ್ಧ   ಸರಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಪರಬಾರೆ ಮಾಡಿದ್ದ ಆರೋಪವಿದೆ.ಕೆಎಎಸ್ ಅಧಿಕಾರಿ ಕೆ.ರಂಗನಾಥ್ ನಿವಾಸದ ಮೇಲೆ ಎಸಿಬಿ ದಾಳಿ acb acb 1

ಬೆಂಗಳೂರು ಉತ್ತರ ಎಸಿಯಾಗಿ 3 ತಿಂಗಳು ಕರ್ತವ್ಯ ನಿರ್ವಹಿಸಿದ್ದ ರಂಗನಾಥ್, ಪ್ರಸ್ತುತ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Key words: ACB –raid- KAS officer -K Ranganath -residence