ಆದಾಯಕ್ಕೂ ಮೀರಿ ಆಸ್ತಿಗಳಿಕೆ: ಕರ್ನಾಟಕ ವಿವಿ ಪ್ರೊಫೇಸರ್ ಸೇರಿ ಸರಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು:ಜೂ-12:(www.justkannada.in) ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶ್ವವಿದ್ಯಾಲಯ ಪ್ರೊಫೆಸರ್ ಸೇರಿದಂತೆ ಮೂವರು ಸರಕಾರಿ ಅಧಿಕಾರಿಗಳ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ದಾಳಿ ನಡೆಸಿದ್ದಾರೆ.

ಕರ್ನಾಟಕ ವಿವಿ ಧಾರವಾಡ ಭೌತಶಾಸ್ತ್ರ ಪ್ರೊಫೆಸರ್, ಈ ಹಿಂದೆ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸಿದ್ದ ಕಲ್ಲಪ್ಪ ಎಂ ಹೊಸಮನಿ, ಉತ್ತರ ಕನ್ನಡ ಜಿಲ್ಲೆ ಜೊಯ್ಡಾ ಉಪ ವಿಭಾಗ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉದಯ್ ಡಿ.ಛಬ್ಬಿ ಮತ್ತು ಮಂಗಳೂರು ಕಚೇರಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಹಾಯಕ ಎಂಜಿನಿಯರ್ ಮಹದೇವಪ್ಪ ಅವರ ಮನೆ, ಕಚೇರಿಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಧಾರವಾಡ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಿನಲ್ಲಿರುವ ಆರೋಪಿತ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಒಟ್ಟು ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಆದಾಯಕ್ಕೂ ಮೀರಿ ಆಸ್ತಿಗಳಿಕೆ: ಕರ್ನಾಟಕ ವಿವಿ ಪ್ರೊಫೇಸರ್ ಸೇರಿ ಸರಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್
ACB Raid,Government officials, including karnataka university professor of dharwad,alleged assets