ಬಾಗಲಕೋಟೆ,ಮೇ,8,2025 (www.justkannada.in): ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಸೀಮಿಕೇರಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಮೂವರು ಬಾಲಕರು ಬಾಗಲಕೋಟೆ ತಾಲ್ಲೂಕು ಮುರನಾಳ ಗ್ರಾಮದವರು ಎಂದು ತಿಳಿದುಬಂದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್ ತೆರಳುತ್ತಿತ್ತು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಹನುಮ ಜಯಂತಿ ಹಿನ್ನೆಲೆ ಡಿಜೆ ಹಾಕಲಾಗಿತ್ತು ಡಿಜೆ ಮೆರವಣಿಗೆ ನೋಡಲು ಬೈಕ್ ನಲ್ಲಿ ತೆರಳಿದ್ದ ಮೂವರು ಬಾಲಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಲಾದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Canter, collides, bike, Three boys, die, on the spot