ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ: ನಾಲ್ವರು ಅಯ್ಯಪ್ಪ ಭಕ್ತರು ಸಾವು

ತುಮಕೂರು,ಜನವರಿ,9,2026 (www.justkannada.in):  ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 48ರಲ್ಲಿ ಇಂದು ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತಪಟ್ಟ ಅಯ್ಯಪ್ಪ ಭಕ್ತರು. ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು ಎನ್ನಲಾಗಿದೆ.

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ.

Key words: Cruiser, collides, lorry, Four, Ayyappa devotees, die