Friday, August 21, 2026

BDA Apartments

Home Crime ಬೈಕ್ ಮತ್ತು ಕಾರು ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೈಕ್ ಮತ್ತು ಕಾರು ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ,ಜನವರಿ,29,2025 (www.justkannada.in): ಬೈಕ್ ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದ ಒಂದೇ ಕುಟುಂಬದ ತಾಯಿ, ಮಗ, ಸೊಸೆ ಸಾವನ್ನಪ್ಪಿದ್ದಾರೆ. ತಾಯಿ ಭಾಗ್ಯಮ್ಮ(58) ಪುತ್ರ ಶಶಿಧರ್(40), ಸೊಸೆ ಶಾಲಿನಿ(35) ಮೃತಪಟ್ಟವರು. ನಿನ್ನೆ ಎಚ್.ಡಿ ಕೋಟೆಯ ಚಿಕ್ಕದೇವಮ್ಮನ ಬೆಟ್ಟಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ನಿನ್ನೆ ಸಂಜೆ ಸುಮಾರು 7.30ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.

ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಹೋಗುತ್ತಿದ್ದ KA10-M 5127 ನಂಬರ್ ನ ಕಾರು ಬೈಕ್ ಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೇಗೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: accident, Three members, same family, die, on the spot