Thursday, September 10, 2026

BDA Apartments

Home Crime ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು

ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು

ಬೆಳಗಾವಿ,ಜನವರಿ,30,2025 (www.justkannada.in): ಬೈಕ್ ಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಆಗಸಗ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ ನಾವಿ, ನಿತೀಶ್ ತರಳೆ ಮೃತಪಟ್ಟ ಬೈಕ್ ಸವಾರರು. ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಇಬ್ಬರ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: accident, Two death, collision , tipper