Sunday, September 27, 2026

BDA Apartments

ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್: ನಡುರಸ್ತೆಯಲ್ಲೇ ಪ್ರಾಣಬಿಟ್ಟ ಯುವಕ BDA JK_Adv BDA Adv
Home Crime ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್: ನಡುರಸ್ತೆಯಲ್ಲೇ ಪ್ರಾಣಬಿಟ್ಟ ಯುವಕ.

ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್: ನಡುರಸ್ತೆಯಲ್ಲೇ ಪ್ರಾಣಬಿಟ್ಟ ಯುವಕ.

ಹಾಸನ,ಮೇ,12,2023(www.justkannada.in):  ಅಪಘಾತ ಸಂಭವಿಸಿ ಒಂದು ಗಂಟೆಯಾದರೂ ಸಕಾಲಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಯುವಕನೋರ್ವ ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣ ಬಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ನಿವಾಸಿ ಆನಂದ್ (30) ಮೃತಪಟ್ಟ ಯುವಕ.

ಆನಂದ್ ಬೇಲೂರು ಕಡೆಯಿಂದ ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಹಿಂಬದಿಯಿಂದ ಬೈಕ್  ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ  ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಆನಂದ್ ನಡುರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್ anand

ಸಕಾಲಕ್ಕೆ ಆಂಬುಲೆನ್ಸ್ ಬಾರದ ಹಿನ್ನೆಲೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ ಘಟನೆ ನಡೆಯಿತು. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: accident- Ambulance – young man- died