ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾದ: ಸ್ಥಳದಲ್ಲೇ ಐವರು ಸಾವು.

ಗದಗ,ಅಕ್ಟೋಬರ್,16,2023(www.justkannada.in):  ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಟಾಟಾ ಸುಮೋದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತರು ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು . ಬಾಲೆ ಹೊಸೂರ ಮಠಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident- between -government bus – Tata Sumo- Five death