ಟ್ರ್ಯಾಕ್ಟರ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ.

ವಿಜಯಪುರ, ಡಿಸೆಂಬರ್,2,2023(www.justkannada.in):  ಟ್ರ್ಯಾಕ್ಟರ್​  ಮತ್ತು ಸರ್ಕಾರಿ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಬಳಿ ಈ ಘಟನೆ  ನಡೆದಿದೆ. ಈ ವೇಳೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅಪಘಾತ ನಡೆದು 2  ಗಂಟೆಗಳ ಬಳಿಕ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ಗಾಯಾಳುಗಳನ್ನ ಆ್ಯಂಬುಲೆನ್ಸ್​ ನಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಇಂಡಿ ತಾಲೂಕಿನ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: accident- between- tractor – government bus- 20 injured.