ಸರ್ಕಾರಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: 24 ಮಂದಿ ದುರ್ಮರಣ

ಹೈದರಾಬಾದ್, ನವೆಂಬರ್,3,2025 (www.justkannada.in): ಸರ್ಕಾರಿ ಬಸ್ ​ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 24 ಮಂದಿ ಸಾವನ್ನಪ್ಪಿರುವ ಘಟನೆ   ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿದಲ್ಲಿ ನಡೆದಿದೆ.

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ  ಈ ಘಟನೆ ನಡೆದಿದೆ.  11 ಮಹಿಳೆಯರು ಸೇರಿ 24 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಜಲ್ಲಿ ತುಂಬಿದ್ದ ಟ್ರಕ್ ಸರ್ಕಾರಿ ಬಸ್‌ ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಜಲ್ಲಿಕಲ್ಲುಗಳು ಏಕಾಏಕಿ ಬಸ್​​ನಲ್ಲಿದ್ದ ಪ್ರಯಾಣಿಕರ ಮೇಲೆ ಬಿದ್ದ ಕಾರಣ, ಹೆಚ್ಚಿನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಚೆವೆಲ್ಲಾ-ವಿಕಾರಾಬಾದ್ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

Key words:  Horrible, accident, government bus, tipper, 24 dead