ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಿಟದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು,  ಅಫಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ 6 ಮಂದಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ.  ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮೃತರ ಬಗ್ಗೆ ಗುರುತು ಪತ್ತೆಯಾಗಿಲ್ಲ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Fatal accident, car, private bus, 6 people, burnt alive