ಲಾರಿ ಡಿಕ್ಕಿ: ಕರ್ತವ್ಯ ನಿರತ KSRTC ಚೆಕ್ಕಿಂಗ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

ಹಾಸನ,ಡಿಸೆಂಬರ್,13,2025 (www.justkannada.in):  ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಕರ್ತವ್ಯನಿರತ ಚೆಕ್ಕಿಂಗ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.

ಶಕುನಿಗೌಡ (57) ಮೃತಪಟ್ಟ ಕೆ ಎಸ್ ಆರ್ ಟಿಸಿ ಚೆಕ್ಕಿಂಗ್ ಇನ್ಸ್ ಪೆಕ್ಟರ್. ಹೆದ್ದಾರಿಯಲ್ಲಿ ಬಸ್ ತಡೆದು ಶಕುನಿ ಗೌಡ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಶಕುನಿಗೌಡ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಏಕಾಏಕಿ ವೇಗವಾಗಿ ಬಂದ ಲಾರಿ ಶಕುನಿಗೌಡ ಅವರಿಗೆ ಢಿಕ್ಕಿ ಹೊಡೆದು ಲಾರಿ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.  ಈ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Lorry, collision, KSRTC, checking inspector, dies