Saturday, September 19, 2026

BDA Apartments

ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು BDA JK_Adv BDA Adv
Home Crime ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು.

ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು.

ರಾಯಚೂರು,ಡಿಸೆಂಬರ್,6,2022(www.justkannada.in): ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನಲ್ಲಿ ನಡೆದಿದೆ.

ಮಸ್ಕಿ ತಾಲ್ಲೂಕಿನ ಗುಡದೂರು ಬಳಿ ಈ ಅಪಘಾತ ಸಂಭವಿಸಿದೆ. ಆಂಧ್ರ ಪ್ರದೇಶ ಮೂಲದ ನಾಗರಾಜ, ಸೀನು, ಹಾಗೂ ಜಯಪಾಲ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ accident

ಭತ್ತ ಕಟಾವು ಮಾಡಲು ಯತ್ರದ ಸಮೇತ ಮಸ್ಕಿಗೆ ಬಂದಿದ್ದರು ಎನ್ನಲಾಗಿದ್ದು ಗುಡದೂರು ಗ್ರಾಮಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident – government bus – bike-Three –death -raichur