ಮೈಸೂರು,ಜೂನ್,4,2025 (www.justkannada.in): ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ದಂಪತಿ, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಂಚೀಪುರ ಗ್ರಾಮದ ಚಿಕ್ಕ ಸ್ವಾಮಿ (45) ಪತ್ನಿ ರೂಪ (38), ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಮೃತಪಟ್ಟವರು. ಚಿಕ್ಕಸ್ವಾಮಿ, ಪತ್ನಿ ರೂಪ ಮತ್ತು ಚನ್ನಮಲ್ಲಮ್ಮ ಎಂಬುವವರು ಬೈಕ್ ಹೋಗುತ್ತಿದ್ದಾಗ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ನಂತರ ಬೈಕ್ ಸವಾರ, ಇಬ್ಬರು ಮಹಿಳೆಯರ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಲಾರಿ ತಮಿಳುನಾಡು ಮೂಲದ್ದಾಗಿದ್ದು ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Accident, couple, woman, died, mysore