ಶಿವಮೊಗ್ಗ,ಅಕ್ಟೋಬರ್,30,2025 (www.justkannada.in): ಮರಕ್ಕೆ ಗೂಡ್ಸ್ ವಾಹನ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಅಸಾದುಲ್ಲ (35), ಸಾಧಿಕ್ (31), ಫೈರೋಜ್ (33) ಅಪಘಾತದಲ್ಲಿ ಮೃತಪಟ್ಟವರು. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿ ಮಾಡಲಾಗಿದೆ.
ಮೃತ ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ಹಿಂದಿರುಗುವ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದು, ಈ ಹಿನ್ನಂತೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
Key words: Goods vehicle, crashes, tree, Three dead ,on the spot







