ಬೆಂಗಳೂರು,ಸೆಪ್ಟಂಬರ್,5,2025 (www.justkannada.in): ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಬೇಕು. ಚಿಕಿತ್ಸೆಗೂ ಮುನ್ನ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನು ಕ್ರಮಕ್ಕೆ ಕೈಗೊಳ್ಳಲಾಗುತ್ತದೆ ಎಂದು ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವಾಗಿಲ್ಲ ರಾಜ್ಯದ ಎಲ್ಲ ಸರ್ಕಾರಿ ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳ ಬಳಿ ಮುಂಗಡ ಹಣಕ್ಕೆ ಒತ್ತಾಯಿಸಿದದೆ ಜೈಲು ಶಿಕ್ಷೆ ವಿಧಿಸುವ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಅಪಘಾತಕ್ಕೊಳಗಾದವರ ಚಿಕಿತ್ಸೆಗೆ ಸಂಬಂಧಿಸಿದಂತೆ ಜಾರಿ ಸಂಸ್ಥೆಗಳು ಮತ್ತು ಅಪಘಾತಕ್ಕೊಳಗಾದವರಿಗೆ ಚಾಲ್ತಿಯಲ್ಲಿರುವ ಕಾನೂನು ಮತ್ತು ಯೋಜನೆಗಳ ನಿಬಂಧನೆಗಳ ಬಗ್ಗೆ ಪುನರುಚ್ಚರಿಸುವುದು ಮತ್ತು ನಿರ್ದೇಶಿಸುವುದು ಅಗತ್ಯವೆಂದು ಪರಿಗಣಿಸಲಾಗಿದೆ” ಎಂದು ಹೇಳಲಾಗಿದೆ.
ಅಪಘಾತಕ್ಕೆ ಒಳಗಾದ ವ್ಯಕ್ತಿ ವೈದ್ಯಕೀಯ ಸಂಸ್ಥೆಗೆ ಬಂದಾಗ ಅಥವಾ ವೈದ್ಯಕೀಯ ಸಂಸ್ಥೆಯ ಮುಂದೆ ಕರೆತಂದಾಗ, ಅಂತಹ ತುರ್ತು ಸಂದರ್ಭಗಳಲ್ಲಿ ಮುಂಗಡ ಪಾವತಿಗೆ ಒತ್ತಾಯಿಸದೆ ಅವರಿಗೆ ಚಿಕಿತ್ಸೆ ನೀಡಬೇಕು”. ಯಾವುದೇ ಉಲ್ಲಂಘನೆಯು ಸೆಕ್ಷನ್ 19(5) ಅಡಿಯಲ್ಲಿ ಒಂದು ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Key words: Government, Accident, injured, persons, treatment, Hospital