ಮಹಿಳೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಆರೋಪ: 7ಮಂದಿಯ ಬಂಧನ.

0
1

ಬೆಳಗಾವಿ, ಡಿಸೆಂಬರ್, 11,2023(www.justkannada.in): ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಹಿನ್ನೆಲೆಯಲ್ಲಿ ಯುವಕ ತಾಯಿಯನ್ನ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು 7 ಮಂದಿಯನ್ನ ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದ.ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ದುಂಡಪ್ಪ ಎಂಬ ಯುವಕ ಯುವತಿಯ ಜೊತೆ ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಮಲಗಿದ್ದ ಯುವಕನ ತಾಯಿಯನ್ನು ಹೊರಗೆಳೆದು ಮಹಿಳೆ ಮೇಲೆ ಹಲ್ಲೆ  ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯನ್ನ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಅಂತಾ ಗೊತ್ತಾಗಿದೆ. ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಬಂದು ತಕ್ಷಣ ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ಮಹಿಳೆಯ ಮಗ ಮತ್ತು ಯುವತಿ ಓಡಿ ಹೋಗಿದ್ದಾರೆ. ಇದೇ ಕಾರಣಕ್ಕೆ ಯುವತಿ ಮನೆಯವರು ಬಂದು ಗಲಾಟೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Key words: Accused – assaulting – woman -7 arrested