ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.

ದಾವಣಗೆರೆ,ಮೇ,27,2024 (www.justkannada.in): ದಾವಣಗೆರೆಯ  ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿಲ್ ಸಾವು ಬಳಿಕ ಪೊಲೀಸ್ ಠಾಣೆ ಮೇಲೆ ಜನರಿಂದ ದಾಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶಿಸಲಾಗಿದೆ.

 ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ , ಇನ್ ಸ್ಪೆಕ್ಟರ್ ಬಿ ನಿರಂಜನ್ , ಎಸ್ ಐ ಅಕ್ತರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಪೂರ್ವವಲಯ ಐಜಿಪಿ ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆದಿಲ್ ಎಂಬ ಆರೋಪಿಯನ್ನ ಪೊಲೀಸರು ಠಾಣೆಗೆ  ಕರೆತಂದಿದ್ದರು. ಈ ವೇಳೆ ಪೊಲೀಸ್ ಠಾಣೆಯಲ್ಲೇ ಆದಿಲ್ ಕುಸಿದು ಬಿದ್ದು ಮೃತಪಟ್ಟಿದ್ದರು. ಮೃತ ಆದಿಲ್ ನ ಪೋಷಕರು ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದರು. ಅಲ್ಲದೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಲಾಗಿತ್ತು. ಇದರಿಂದ ಪೊಲೀಸ್ ವಾಹನಗಳು ಜಖಂ ಆಗಿದ್ದವು.

Key words: Accused, death, police station, suspended