Sunday, September 13, 2026

BDA Apartments

50 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಏನು..? ಎಂಬ ಬಿಜೆಪಿ ಟೀಕೆಗೆ ತಿರುಗೇಟು ಕೊಟ್ಟ ...
Home Front Page 50 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಏನು..? ಎಂಬ ಬಿಜೆಪಿ ಟೀಕೆಗೆ ತಿರುಗೇಟು ಕೊಟ್ಟ ಎಐಸಿಸಿ...

50 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಏನು..? ಎಂಬ ಬಿಜೆಪಿ ಟೀಕೆಗೆ ತಿರುಗೇಟು ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಮೈಸೂರು,ಆಗಸ್ಟ್,30,2023(www.justkannada.in): 50 ವರ್ಷದಲ್ಲಿ ಕಾಂಗ್ರೆಸ್ ಏನು  ಸಾಧನೆ ಏನು ಎಂದು ಪದೇ ಪದೇ ಟೀಕಿಸುತ್ತಿದ್ದ ಬಿಜೆಪಿಗೆ ತಿರುಗೇಟು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 50 ವರ್ಷ ಕಾಂಗ್ರೆಸ್ ಸಾಧನೆಯ ರಿಪೋರ್ಟ್ ಕಾರ್ಡ್ ಇದೆ.  ನಮ್ಮ ಬಳಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂಬ ರಿಪೋರ್ಟ್ ಕಾರ್ಡ್ ಇದೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಮಾಡಿದ ಎಲ್ಲಾ ಕಾರ್ಯಗಳ ರಿಪೋರ್ಟ್ ನಮ್ಮ ಬಳಿ ಇದೆ ಎಂದು ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ಕಾಂಗ್ರೆಸ್  ನೀಡಿದ್ದ ಭರವಸೆಯನ್ನ ಪೂರೈಸಿದೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಾಗ, ಕೇಂದ್ರ ನಾಯಕರು ಟೀಕೆ ಮಾಡಿದರು. ಇದರಿಂದ ಆರ್ಥಿಕತೆ ಕುಸಿಯುತ್ತೆ. ಬೋಗಸ್ ಎಂದಿದ್ದರು. ಆದ್ರೆ ನಾವು ಇದನ್ನು ಮಾಡಿ ತೊರಿಸಿದ್ದೇವೆ ಎಂದು ಟಾಂಗ್ ನೀಡಿದರು.50 ವರ್ಷದಲ್ಲಿ ಕಾಂಗ್ರೆಸ್ ಸಾಧನೆ ಏನು..? ಎಂಬ ಬಿಜೆಪಿ ಟೀಕೆಗೆ ತಿರುಗೇಟು ಕೊಟ್ಟ ...

50 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಂದ್ರ ನಾಯಕರು ಟೀಕಿಸುತ್ತಾರೆ. ಆದ್ರೆ ನಾವು ವಿಮಾನ ನಿಲ್ದಾಣ, ಅನೇಕ ಸಂಸ್ಥೆಗಳನ್ನು ಮಾಡಿದ್ದೇವೆ. ನಾವು ಮಾಡಿದ ಕೆಲಸಗಳಲ್ಲಿ ಹುಡುಕಾಡಿ ಸುಣ್ಣ ಬಣ್ಣ ಬಳಿದು ತಮ್ಮದೆನ್ನುತ್ತಾರೆ. 14% ಇಂದ 74% ಜನರಿಗೆ ನಮ್ಮ ಸರ್ಕಾರದ ಸಮಯದಲ್ಲಿ ಶಿಕ್ಷಿತರನ್ನಾಗಿ ಮಾಡಲಾಗಿದೆ. ಎಸ್​ಸಿ , ಎಸ್ ಟಿ​ಗಳ ಶಿಕ್ಷಣ ಕೇವಲ 7% ಇತ್ತು. ನಾವು 60% ಮಾಡಿದ್ದೇವೆ. 1947ರ ಹಿಂದೆ 2 ಲಕ್ಷ ಪ್ರಾರ್ಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ನರೇಗಾಯೋಜನೆ  ನಾವು ತಂದಿದ್ದು, ಸೋನಿಯಾ ಗಾಂಧಿಯವರು ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದರು.  ಅದಕ್ಕೆ ಉಚಿತ ಅನ್ನ ಭಾಗ್ಯವೂ ನಾವು ತಂದದ್ದು. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ ಅವರು ಶ್ರೀಮಂತರಾ ಗಿದ್ದಾರೆ. ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದರೆ ರಾಹುಲ್ ಯಾವುದಕ್ಕೂ ಹೆದರುವುದಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Key words: achievement – Congress – 50 years-AICC president- Mallikarjuna Kharge