Sunday, August 23, 2026

BDA Apartments

Home Front Page ಕಡಿಮೆ ಅವಧಿಯಲ್ಲಿ ಅಪೂರ್ವ ಸಾಧನೆ- ಸಿದ್ದರಾಮಯ್ಯ ಸರ್ಕಾರ ಕೊಂಡಾಡಿದ ಸುರ್ಜೇವಾಲ.

ಕಡಿಮೆ ಅವಧಿಯಲ್ಲಿ ಅಪೂರ್ವ ಸಾಧನೆ- ಸಿದ್ದರಾಮಯ್ಯ ಸರ್ಕಾರ ಕೊಂಡಾಡಿದ ಸುರ್ಜೇವಾಲ.

ಬೆಂಗಳೂರು,ಮೇ,20,2024 (www.justkannada.in): ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೊಂಡಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ,  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಒಂದು ವರ್ಷ ಪೂರೈಸಿದೆ. ಕಡಿಮೆ‌ ಅವಧಿಯಲ್ಲಿ ಸರ್ಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನ ಮನ್ನಣೆ ಗಳಿಸಿದೆ. ಯಾವುದೇ ಜಾತಿ, ಧರ್ಮ ಎಂದು ನೋಡದೇ ಎಲ್ಲ ವರ್ಗವನ್ನೂ ಸಮಾನಾಗಿ ಕಾಣುವ ಮೂಲಕ ಸರ್ವರಿಗೂ ಸಮಬಾಳು – ಸಮಪಾಲು ಎಂಬ ತತ್ತ್ವವನ್ನು ಸಾರಿದೆ ಎಂದು ಗುಣಗಾನ ಮಾಡಿದರು.

ಕೇವಲ ರಸ್ತೆ, ಸೇತುವೆಯಂಥ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಮಾತ್ರ ಸರ್ಕಾರದ ಕೆಲಸವಲ್ಲ. ಬಡವರು, ಮಹಿಳೆಯರು,‌ ರೈತರು ಸೇರಿದಂತೆ ಶ್ರಮಿಕ ವರ್ಗವನ್ನೂ ಸಹ ಆರ್ಥಿಕವಾಗಿ ಸಶಕ್ತರನ್ನಾಗಿಸಿ, ಮುಖ್ಯವಾಹಿನಿಗೆ ತಂದು, ಸರ್ವರ ಸರ್ವತೋಮುಖ ಅಭಿವೃದ್ಧಿ ಮಾಡುವುದು ಎಂಬ ವಿಭಿನ್ನ ಆಶಯದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಡಿ ಇಟ್ಟಿದೆ‌. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಲ್ಲಿ, ಅಷ್ಟೇ ಏಕೆ ವಿಶ್ವದಲ್ಲೇ ಮಾದರಿಯಾಗಿದೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.

Key words: achievement, congress, government, Surjewala